ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ (RailTel Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಎಂಜಿನಿಯರ್ಸ್ ಹಾಗೂ ಡಿಪ್ಲೋಮಾ ಎಂಜಿನಿಯರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 40
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಎಂಜಿನಿಯರ್ಸ್ ಹಾಗೂ ಡಿಪ್ಲೋಮಾ ಎಂಜಿನಿಯರ್ಸ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 27
ಇತ್ತೀಚೆಗಷ್ಟೇ ಡಿಪ್ಲೋಮಾ ಹಾಗೂ ಎಂಜಿನಿಯರಿಂಗ್ ಪದವಿ ಮುಗಿಸಿ, ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 14 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ railtel.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!



















