ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಬಂದೊದಗಿದೆ. ಹೌದು, ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯ ರೈಲ್ವೆ ಮಂಡಳಿಯಲ್ಲಿ ಖಾಲಿ (Railway Board Recruitment 2025) ಇರುವ 2,570 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ವೆ ಮಂಡಳಿ
ಒಟ್ಟು ಹುದ್ದೆಗಳು: 2,570
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಉದ್ಯೋಗದ ಸ್ಥಳ: ದೇಶಾದ್ಯಂತ
ಜೂನಿಯರ್ ಎಂಜಿನಿಯರ್, ಡಿಪೊ ಮೆಟಿರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ indianrailways.gov.in ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
‘