ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.


















