ಚಿಕ್ಕಮಗಳೂರು: ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಿಶು ಪಾಲನಾ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.