ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾಗಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎನ್ನಲಾಗಿದೆ.
ಕರಾವಳಿಯ ಜಿಲ್ಲೆಯಾಗಿರುವ ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಇನ್ನುಳಿದಂತೆ ಉತ್ತರ ಒಳನಾಡಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಫೆಬ್ರವರಿ ತಿಂಗಳಲ್ಲೇ ಗರಿಷ್ಠ ಪ್ರಮಾಣದ ತಾಪಮಾನ ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಭಾನುವಾರ ಬೀದರ್ ನಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.