ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.