ಬೆಂಗಳೂರು: ಚಳಿಯಿಂದ ನಡುಗುತ್ತಿರುವ ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ(Rain forecast)ನೀಡಲಾಗಿದೆ. ಪೂರ್ವೋತ್ತರ ಮಾರುತಗಳು (Northeast winds) ಹಲವೆಡೆ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯದ ಕೆಲವೆಡೆ ಮಳೆಯಾಗಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಸೋಮವಾರ ಕೂಡ ಕರಾವಳಿ(coast) ಮತ್ತು ದಕ್ಷಿಣ ಒಳನಾಡಿನ (South Inland) ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಾಳೆಯಿಂದ ಮತ್ತೆ ರಾಜ್ಯದಲ್ಲಿ ಒಣ ಹವೆ(dry air) ಮುಂದುವರಿಯಲ್ಲಿ , ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಚಳಿ, ಮಂಜಿನ ವಾತಾವರಣ (Foggy weather) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.