ಬೆಂಗಳೂರು: ರಾಜ್ಯದಲ್ಲಿ ಜೂನ್ 11 ರಿಂದ ಮುಂಗಾರು ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜೂನ್ 11ರಂದು ಬಳ್ಳಾರಿ, ವಿಜಯನಗರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 12ಕ್ಕೆ ಬಳ್ಳಾರಿ, ವಿಜಯಪುರ, ವಿಜಯನಗರ, ದಾವಣಗೆರೆ, ಕಲ್ಬುರ್ಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.