ಬೆಂಗಳೂರು: ರಾಜ್ಯದ ಜನರು ಬೇಸಿಗೆ ಬಿರು ಬಿಸಿಲಿಗೆ ಬಿದ್ದು ಒದ್ದಾಡುತ್ತಿದ್ದಾರೆ. ಈ ಮಧ್ಯೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆ ಬೀಳುತ್ತಿದೆ. ಅಲ್ಲದೇ, ಇಂದಿನಿಂ ಒಂದು ವಾರ ಮತ್ತೆ ಮಳೆಯಾಗುವ ಮುನ್ಸೂಚನೆ ಕೂಡ ಇದೆ. ಇಂದಿನಿಂದ ಒಂದು ವಾರ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲಿ ಕೂ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.