ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೂಡ ಮಳೆಯಾಗುತ್ತಿದ್ದು, ಸೋಮವಾರ ಹಲೆವೆಡೆ ಮಳೆಯಾಗಿದೆ.
ಇಂದು ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ. ಸೋಮವಾರ ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



















