ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಕಾವು ಜೋರಾಗಿದೆ. ಈ ಮಧ್ಯೆ ಮಳೆಯ ಮುನ್ಸೂಚೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಮಂಗಳವಾರ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ (Rain) ಸುರಿದಿತ್ತು. ಈಗ ಬೆಂಗಳೂರಿಗೆ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮಂಗಳೂರು, ಹಾಸನದಲ್ಲಿ ಮಳೆ ಆಗಿದ್ದು, ಬಿಸಿಲಿನಿಂದ ರೋಸಿ ಹೋಗಿದ್ದ ಜನರಿಗೆ ತಂಪು ಎರೆದಂತಾಗಿದೆ.
ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾತನಾಡಿ, ತಿಂಗಳ ಆರಂಭದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು. ತಾಪಮಾನ ಏರಿಕೆ ಬೆನ್ನಲೆ ನಿನ್ನೆಯಿಂದ ಮಳೆಯಾಗುತ್ತಿದೆ. ನಾಳೆ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಂಗಳೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಸಹಜ ತಾಪಮಾನಕ್ಕಿಂತ 4 ರಿಂದ 5 ಡಿಗ್ರಿಯಷ್ಟು ತಾಪಮಾನ ಏರಿಕೆಯಾಗಿದೆ. ಮಂಗಳೂರು ಹಾಗೂ ಕಲಬುರಗಿಯಲ್ಲಿ ಹೀಟ್ ವೇವ್ ಎಚ್ಚರಿಕೆ ಇದೆ ಎಂದಿದ್ದಾರೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15ರ ಬಳಿಕ ಒಣ ಹವೆ ಮುಂದುವರೆಯಲ್ಲಿದೆ. ಈ ತಿಂಗಳ ಕೊನೆಯಲ್ಲಿ ಬೆಂಗಳೂರಿಗೆ ಗರಿಷ್ಠ ತಾಪಮಾನ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ.