ಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಹಲವೆಡೆ ಗುಡುಗು- ಸಹಿತ ಮಳೆಯಾಗುತ್ತಿದೆ. ಈಗ ಏ. 3ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಲಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಹಲವೆಡೆ ತಾಪಮಾನ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದರೆ, ಹಲವೆಡೆ ಯಥಾಸ್ಥಿತಿಯಲ್ಲಿ ಇದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.