ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ವಾತಾವರಣ ಇರಲಿದೆ.