ಬಳ್ಳಾರಿ : ವಿಜಯನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ ಆವರಣದಲ್ಲಿ ಮಳೆ ನೀರು ನಿಂತಿದ್ದು, ಭಕ್ತರು ಪರದಾಡುವಂತಾಗಿದೆ.
ಐತಿಹಾಸಿಕ ಹಂಪಿಯ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದ್ದು, ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ.
ಕೆಲ ಭಕ್ತರು ಬೇರೆ ದಾರಿಯಿಲ್ಲದೇ ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ. ಮಳೆ ಬಂದಾಗ ನೀರು ಹೊರಹೋಗುವ ವ್ಯವಸ್ಥೆ ಮಾಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರವಾಸಿಗರು, ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.
ಇದನ್ನೂ ಓದಿ : ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!


















