ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾರಿ ಸುರಿಯುತ್ತಿರುವ ಪುಷ್ಯಾ ಮಳೆಯಿಂದಾಗಿ ಮನೆಯ ಚಾವಣಿ ಹಾಗೂ ದನದ ಕೊಟ್ಟಿಗೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಶೇಖರ ಪೂಜಾರಿ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆ ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದ ಹಿನ್ನೆಲೆ ಕೊಟ್ಟಿಗೆಯಲ್ಲಿ ಇದ್ದ 12 ಜಾನುವಾರುಗಳು ಗಾಯಗೊಂಡಿವೆ.

ಶಿವಮೊಗ್ಗ ನಗರದಲ್ಲಿ ಮಳೆಯ ಅವಾಂತರಕ್ಕೆ ಆಶೋಕ ನಗರದಲ್ಲಿ ಕುಮಾರ್ ಎಂಬುವವರಿಗೆ ಸೇರಿದ ಮನೆ ಛಾವಣಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.