ಬೆಂಗಳೂರು : ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಬಾಗಲಕೋಟೆ, ಬೀದರ್, ವಿಜಯಪುರ, ಗದಗ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಎಲ್ಲೋ ಅಲರ್ಟ್ ಘೋಷಿಸಿದೆ.