ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ (Rain) ಆರಂಭವಾಗಿದೆ. ಹೀಗಾಗಿ ಕೆಲವೆಡೆ ಅವಾಂತರ ಸೃಷ್ಟಿಯಾಗಿದೆ.
ಧಾರವಾಡ, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯಿಂದಾಗಿ ಮೂಡಿಗೆರೆಯ ತರುವೆ ಗ್ರಾಪಂ ಸಭೆ ನಡೆಯುತ್ತಿದ್ದ ವೇಳೆ ಗ್ರಂಥಾಲಯಕ್ಕಾಗಿ ಇಟ್ಟಿದ್ದ ಮರದ ರ್ಯಾಕ್ ಬಿದ್ದು, ಐವರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಹಾವೇರಿ ತಾಲೂಕಿನ ಕಬ್ಬೂರಿನಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಧಾರವಾಡ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿ, ಮರ, ವಿದ್ಯುತ್ ಕಂಬಗಳು ಬಿದ್ದಿವೆ.