ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದ್ದು, ರೈತರು ಬಿತ್ತನೆಯ ಚಟುವಟಿಕೆ ಮುಂದುವರೆಸಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಕೂಡ ಮಳೆಯ ಮುನ್ಸೂಚನೆ ನೀಡಿದೆ.
ಜೂನ್ 4 ರಿಂದ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುವ ಲಕ್ಷಣವಿದೆ. ಜೂನ್ 4 ರಿಂದ ಆರಂಭವಾಗಿ ಜೂನ್ 6 ರವರೆಗೆ ಹೆಚ್ಚು ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ, ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಮಳೆ ಆರಂಭವಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಸೇರಿದಂತೆ ದಕ್ಷಿಣದ ಆರು ಜಿಲ್ಲೆಗಳಲ್ಲಿ ಸಾಮಾನ್ಯದಿಂದ ಸ್ವಲ್ಪ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮನ್ಸೂಚನೆ ನೀಡಿದೆ.