ರಾಜ್ಯದ ಕೆಲವೆಡೆ ರಜೆ ಪಡೆದ ಮಳೆರಾಯ ಹಲವೆಡೆ ಸುರಿಯುತ್ತಲೇ ಇದ್ದಾನೆ. ಈಗ ಮತ್ತೆ ಹಲವೆಡೆ ಅಬ್ಬರಿಸಲು ಸಿದ್ಧನಾಗಿದ್ದಾನೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಲು ಸಿದ್ಧನಾಗಿದ್ದಾನೆ. ಮುಂದಿನ ಏಳು ದಿನಗಳು ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಒಡಿಶಾದ ಮೇಲಿನ ಗಾಳಿಯ ಚಂಡಮಾರುತವು ಈಗ ದಕ್ಷಿಣ ಒಡಿಶಾದ ಉತ್ತರ ಆಂಧ್ರಪ್ರದೇಶ ಕರಾವಳಿಗೆ ಹೊಂದಿಕೊಂಡಿದೆ.
ಆಂಧ್ರಪ್ರದೇಶ ಮತ್ತು ಪಕ್ಕದ ಆಂತರಿಕ ಕರ್ನಾಟಕದ ಮೇಲೆ 3.1 ಕಿ.ಮೀನಿಂದ 7.6 ಕಿ.ಮೀವರೆಗೆ ಎತ್ತರದೊಂದಿಗೆ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ನೈಋತ್ಯ ಕಡೆಗೆ ವಾಲುತ್ತಿದೆ. ಹೀಗಾಗಿ ಕರ್ನಾಟಕದ ಒಳನಾಡಿನ ಕೆಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.