ಉಡುಪಿ | ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿ ಜನತೆಗೆ ವರುಣ ತಂಪೆರೆದಿದ್ದು, ಉಡುಪಿ, ದಕ್ಷಿಣ ಕನ್ನಡದ ಹಲವು ಪ್ರದೇಶಗಳಲ್ಲಿ ಇಂದು ಅಕಾಲಿಕ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶನಿವಾರ ಸಂಜೆ ವೇಳೆ ಉತ್ತಮ ಮಳೆಯಾಗಿದೆ.
ಕಾರ್ಕಳ ತಾಲ್ಲೂಕಿನ ನೆಲ್ಲಿಕಾರು, ಬೆಳ್ತಂಗಡಿಯ ನಾರಾವಿ, ಕಡಿರುದ್ಯಾವರ, ಕಾಶಿಪಟ್ಣ ಮೊದಲಾದ ಭಾಗಗಳಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಅನಿರೀಕ್ಷಿತ ಮಳೆಯಾಗಿದೆ.
ಇದನ್ನೂ ಓದಿ : ಸಿಎಸ್ ಶಾಲಿನಿ ರಜನೀಶ್ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ



















