ಹಾವೇರಿಯಲ್ಲಿ ಸಂಜೆ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ನಗರದ ಮಿಡ್ ಮ್ಯಾಕ್ ರೋಡ್ ನಲ್ಲಿ ವಿದ್ಯುತ್ ಕಂಬದಲ್ಲಿ ವೈರಲ್ ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು. ನಗರದ ಮಿಡ್ ಮ್ಯಾಕ್ ರೋಡ್ ನಲ್ಲಿ ಈ ಘಟನೆ ನಡೆದಿದೆ. ಒಂದಕ್ಕೊಂದು ವೈರ್ ತಗುಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಆನಂತರ ಪಕ್ಕದಲ್ಲಿದ್ದ ಮರವೊಂದಕ್ಕೆ ಬೆಂಕಿ ಆವರಿಸಿದೆ.