ಬೆಂಗಳೂರು: ಮಳೆರಾಯ ಕೆಲವೆಡೆ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದರೆ, ಹಲವೆಡೆ ಇನ್ನೂ ಆರ್ಭಟಿಸುತ್ತಿದ್ದಾನೆ. ಕೆಲವೆಡೆ ವಿಶ್ರಾಂತಿಯ ಮಧ್ಯೆಯೂ ಅಬ್ಬರಿಸಲು ಸಿದ್ಧನಾಗಿದ್ದಾನೆ. ಹೀಗಾಗಿ ಇಂದು ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನ. 17ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಹವಮಾನಾ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೇ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಬೆಂಗಳೂರಿನ ಕೆಲವೆಡೆ ಭಾನುವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.