ಬೆಂಗಳೂರು: ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಂಗಳವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.