ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಜುಲೈ 17ರಂದು ಬುಧವಾರ ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಕೂಡ ವ್ಯಾಪಕ ಮಳೆಯಾಗುತ್ತಿದೆ. ಗುಡ್ಡ ಕುಸಿತ, ಮರ ನೆರಕ್ಕುರುಳುವ ಘಟನೆಗಳು ನಡೆದಿವೆ. ಹೀಗಾಗಿ ಈ ಮೂರು ಜಿಲ್ಲೆಗಳಲ್ಲಿ ಬುಧವಾರ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಹಾಸನ, ಮೈಸೂರು, ಬೆಳಗಾವಿ, ಬೀದರ್, ರಾಯಚೂರು, ಕಲಬುರ್ಗಿ ಹಾಗೂ ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.