ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯಾಗುತ್ತಿದ್ದು, ಜನ ಹೈರಾಣಾಗಿದ್ದಾರೆ.
ಸಿಲಿಕಾನ್ ಸಿಟಿಯ ರೇಸ್ ಕೋರ್ಸ್, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಸುತ್ತಾಮುತ್ತ ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ.
ಸಂಜೆ ವೇಳೆಗೆ ಏಕಾಏಕಿ ಮಳೆ ಶುರುವಾಗಿದ್ದು, ನಿನ್ನೆಯಂತೆ ಇಂದು ಕೂಡ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದವರು ಮಳೆಯಿಂದಾಗಿ ಕಂಗಾಲಾಗುವಂತಾಗಿದೆ.