ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಕಾಲ ಅಬ್ಬರಿಸಿದ್ದ ಮಳೆರಾಯ ಕೆಲವು ದಿನ ವಿಶ್ರಾಂತಿ ಪಡೆದಿದ್ದ. ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದಾನೆ.
ರಾಜ್ಯದಲ್ಲಿನ ಬರೋಬ್ಬರಿ 19ಕ್ಕೂ ಅಧಿಕ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನ- ಜೀವನ ಅಸ್ತವ್ಯಸ್ಥಗೊಂಡಿದೆ.