ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಭಾನುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ 20 ಸೆಂ.ಮೀಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಮೈಸೂರು, ಬೀದರ್ ಕಲಬುರಗಿ ಜಿಲ್ಲೆಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಸೋಮವಾರ ಮತ್ತು ಮಂಗಳವಾರ ಕರಾವಳಿಯ ಮೂರು ಜಿಲ್ಲೆ ಹಾಗೂ ಕೊಡಗು ಜಿಲ್ಲೆಗೆ ‘ರೆಡ್ ಅಲರ್ಟ್’, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಹಾಸನ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಿಗೆ ‘ಯಲ್ಲೋ’ ಅಲರ್ಟ್ ಘೋಷಿಸಲಾಗಿದೆ.