ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಲ್ಲಲ್ಲಿ ಸುರಿಯುತ್ತಿದ್ದು, ವಾರ ಪೂರ್ತಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮ ಇಂದಿನಿಂದ ರಾಜ್ಯಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನುಳಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.
ಶನಿವಾರ ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.