ಬೆಂಗಳೂರು : ಸಚಿವ ಕೆ.ಎನ್. ರಾಜಣ್ಣ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮಧ್ಯೆ ಶೀತಲ ಸಮರ ಮುಂದುವರೆದಿದೆ. ಸದ್ಯ ರಾಜಣ್ಣ ಬಗ್ಗೆ ಮಾತನಾಡಿರುವ ಡಿಕೆಶಿ, ರಾಜಣ್ಣ ದೊಡ್ಡವರು, ಅವರ ಬಗ್ಗೆ ಮಾತನಾಡುವುದಿಲ್ಲ. ಅವರು ಪಕ್ಷದ ಹಿರಿಯ ನಾಯಕರು, ನಾನು ಸಾಮಾನ್ಯ ಕಾರ್ಯಕರ್ತ ಎಂದು ಟಾಂಗ್ ಕೊಟ್ಟಿದ್ದಾರೆ.
ಸಚಿವ ರಾಜಣ್ಣ ದೆಹಲಿ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ ಅಂದಿದ್ದಾರೆ. ರಾಜಣ್ಣ ಸರ್ಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಅದಕ್ಕೆ ಸಿಎಂ ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ.
ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವೈಫಲ್ಯವಿದೆ ಎಂಬ ರಾಜಣ್ಣ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ. ಅದಕ್ಕಾಗಿ ಪೊಲೀಸರಿಗೆ ಅಭಿನಂದಿಸುತ್ತೇನ. ಈ ಕುರಿತು ಸಿಎಂ ಹಾಗೂ ಗೃಹ ಮಂತ್ರಿ ಉತ್ತರಿಸುತ್ತಾರೆ ಎಂದಿದ್ದಾರೆ.