ಮಧುಗಿರಿ/ತುಮಕೂರು : ಕೆ.ಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ರಾಜಣ್ಣ ಅಭಿಮಾನಿಗಳು, ಬೆಂಬಲಿಗರು ಇಂದು(ಮಂಗಳವಾರ) ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರಾಜಣ್ಣ ಅಭಿಮಾನಿ ಶಿವಲಿಂಗ ಎನ್ನುವವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದವರು ತಡೆದು ಸಮಾಧಾನಪಡಿಸಿದ್ದರು.
ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಪಟ್ಟಣದ ಎಂ.ಎನ್.ಕೆ ಸಮುದಾಯ ಭವನದಲ್ಲಿ ಜಮಾವನೆಗೊಂಡರು. ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿದ್ದಾರೆ. ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಳಿಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಪಟ್ಟಣ ಬಂದ್ ಗೆ ಕರೆ ನೀಡಿದ್ದಾರೆ.


















