ತಿರುವನಂತಪುರಂ: ಕೇಂದ್ರದ ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ರಾಜಕೀಯ ಜೀವನಕ್ಕೆ ಅಂತ್ಯ ಹಾಡಿದ್ದು, ಭಾವುಕ ಪೋಸ್ಟ್ ಮಾಡಿದ್ದಾರೆ.
ಎನ್‌ಡಿಎ ಅಧಿಕಾರಕ್ಕೆ ಬಂದ ದಿನವೇ, ಬರೋಬ್ಬರಿ 18 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆ ಅಂತ್ಯಗೊಂಡಿದೆ ಎಂದು ಪೋಸ್ಟ್ ಮಾಡಿದ್ದಾರೆ. ನರೇಂದ್ರ ಮೋದಿ ಅವರ ಹಿಂದಿನ ಸರ್ಕಾರದಲ್ಲಿ ರಾಜೀವ್ ಚಂದ್ರಶೇಖರ್ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ರಾಜ್ಯ ಸಚಿವರಾಗಿದ್ದರು. ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಸೋತಿದ್ದಾರೆ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ತಮ್ಮ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಕೊನೆಗೊಳಿಸುವ ಉದ್ದೇಶವನ್ನು ಎಂದಿಗೂ ಹೊಂದಿಲ್ಲ. ಪ್ರಧಾನಿ ಮೋದಿಯವರೊಂದಿಗೆ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುವ ಭಾಗ್ಯ ನನಗಿದೆ ಎಂದೂ ಸೇರಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ನನ್ನ 18 ವರ್ಷಗಳ ಸೇವೆಗೆ ಇಂದು ತೆರೆ ಬಿದ್ದಿದೆ, ಅದರಲ್ಲಿ ಮೂರು ವರ್ಷಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಟೀಂ ಮೋದಿ2.0 ನೊಂದಿಗೆ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿತ್ತು ಎಂದು ಬರೆದುಕೊಂಡಿದ್ದಾರೆ.
ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಕೊನೆಗೊಳಿಸಲು ನಾನು ಖಂಡಿತವಾಗಿಯೂ ಉದ್ದೇಶಿಸಿರಲಿಲ್ಲ, ಆದರೆ ಅದು ಹಾಗೆಯೇ ನಡೆಯುತ್ತಿದೆ” ಎಂದು ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.