ತಲೆಯಲ್ಲಿ ಕೂದಲು ಉದುರಿವೆ. ಸಿನಿಮಾ ಸಂದರ್ಭದಲ್ಲಿ ಅವರು ಟೋಪನ್ ಧರಿಸುತ್ತಾರೆ. ಹಲ್ಲು ಉದುರಿವೆ. ಆದರೂ 73ನೇ ವಯಸ್ಸಿನಲ್ಲಿ ರಜನಿಕಾಂತ್ ನಟನೆ ಮಾಡುತ್ತಿದ್ದಾರೆ ಎಂದು ಡಿಎಂಕೆ ನಾಯಕ ಅಪಹಾಸ್ಯ ಮಾಡಿದ್ದಾರೆ.
ಇಷ್ಟು ವಯಸ್ಸಾದರೂ ರಜನಿಕಾಂತ್ ಅವರ ನಟನೆ ಕಂಡು ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ. ಯುವ ನಟರ ಚಿತ್ರಗಳಿಗಿಂತಲೂ ಇನ್ನೂ ರಜನಿ ಚಿತ್ರಕ್ಕೆ ಹೆಚ್ಚು ಬೇಡಿಕೆಯಿದೆ. ಆದರೂ ಡಿಎಂಕೆ ನಾಯಕ ದೊರೈ ಮುರುಗನ್ ಮಾತ್ರ ಈ ರೀತಿಯ ಹೇಳಿಕೆ ನೀಡಿದ್ದಾರೆ.
ರಜನಿಕಾಂತ್ ಅವರು ಹಲ್ಲು-ಕೂದಲು ಕಳೆದುಕೊಂಡ ನಂತರವೂ ನಟಿಸುತ್ತಿದ್ದಾರೆ. ರಜನಿಕಾಂತ್ ರಂತಹ ವಯಸ್ಸಾದ ನಟರು ಈಗಲೂ ನಟಿಸುತ್ತಿರುವುದಕ್ಕೆ ಯುವ ಕಲಾವಿದರಿಗೆ ಸಿನಿಮಾದಲ್ಲಿ ನಟಿಸೋ ಚಾನ್ಸ್ ಸಿಗುತ್ತಿಲ್ಲ’ ಎಂದು ಬೇಸರಿಸಿಕೊಂಡಿದ್ದಾರೆ.
ರಜನಿಕಾಂತ್ ಅವರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕರ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಅವರು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರನ್ನು ಹೊಗಳಿದ್ದರು. ಪಕ್ಷದ ಹಳೆಯ ತಲೆಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದೀರಿ ಎಂದು ಸ್ಟಾಲಿನ್ ಗೆ ಹೇಳಿದ್ದರು. ಹಳೆಯ ನಾಯಕರನ್ನು ಹಳೆಯ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದ್ದರು.
ಹೊಸ ನಾಯಕರು ಬರೋಕೆ ಹಳೆಯ ನಾಯಕರು ಅವಕಾಶ ಮಾಡಿಕೊಡಲ್ಲ ಎಂದಿದ್ದರು. ಹೀಗಾಗಿಯೇ ರಜನಿಕಾಂತ್ ಅವರ ಮೇಲೆಕೋಪಗೊಂಡಿರುವ ದುರೈ ಮುರುಗನ್ ಈ ರೀತಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ನಟ ರಜನಿಕಾಂತ್ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ. ಅಮಿತಾಭ್ ಬಚ್ಚನ್, ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.