ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆಗೆ ಧಮ್ಕಿ ಪ್ರಕರಣದಲ್ಲಿ ಬಂಧನವಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹಾಗೂ ಆತನಿಗೆ ಆಶ್ರಯ ನೀಡಿದ್ದ ಉದ್ಯಮಿ ಮೈಕಲ್ ರೇಗೋ ಎಂಬವರನ್ನು ಕೇರಳದ ಗಡಿಯಲ್ಲಿ ಪೊಲೀಸರು ಸೋಮವಾರ ಬಂಧಿಸಿದ್ದರು. ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಗಳನ್ನು ಶಿಡ್ಲಘಟ್ಟದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರು ಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ರಾಜೀವ್ ಗೌಡನನ್ನು ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಇನ್ನು ಕೈ ಮುಖಂಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಮೈಕಲ್‌ಗೆ ಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ.
ಇದನ್ನೂ ಓದಿ : ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜು ಚಟುವಟಿಕೆಗಳಲ್ಲಿ ಎಲ್ಲಾ ಪಕ್ಷದ ಪ್ರಭಾವಿಗಳು ಶಾಮೀಲಾಗಿದ್ದಾರೆ | ಗೃಹ ಸಚಿವ ಪರಮೇಶ್ವರ್



















