ವಿಪ ಸದಸ್ಯ ಎನ್. ರವಿಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಷಯವಾಗಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.
ರವಿಕುಮಾರ್ ಮಾತು ಅಮಾನವೀಯವಾಗಿದೆ. ನಾನು ರಾಜ್ಯ ಸರ್ಕಾರದ ವಿಳಂಬ ಧೋರಣೆ ಬಗ್ಗೆ ಹಲವು ದಿನಗಳಿಂದ ಹೋರಾಟ ಮಾಡಿದ್ದೇನೆ. ಇದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ ಮಾಡಿದ್ದೇನೆ. ನನಗೆ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕಡಿಮೆ ಬೀಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ ಎಂದು ಹೇಳಿದರು.