ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!

July 7, 2026
Share on WhatsappShare on FacebookShare on Twitter

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ)ದ ತನಿಖೆ ತೀವ್ರಗೊಂಡಿದ್ದು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವಿವಿಧ ಕಾರ್ಯಕ್ರಮಗಳಿಗಾಗಿ ವೆಚ್ಚ ಮಾಡಿರುವ ಬರೋಬ್ಬರಿ 124 ಕೋಟಿ ರೂಪಾಯಿಗಳಿಗೂ ಅಧಿಕ ಹಣದ ಮೇಲೆ ಈಗ ಎಸ್ಐಟಿ ನಿಗಾ ಇಟ್ಟಿದೆ. ಭಕ್ತರ ಕಾಣಿಕೆ ಕಳುವು ಆರೋಪದ ಹಿನ್ನೆಲೆಯಲ್ಲಿ ರಚನೆಯಾಗಿದ್ದ ಎಸ್‌ಐಟಿ, ಇದೀಗ ತನ್ನ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದು, ಕಳೆದ ಎರಡು ವರ್ಷಗಳ ಟ್ರಸ್ಟ್‌ನ ಆಡಿಟ್ ವರದಿಗಳು, ಪಾವತಿ ವೋಚರ್‌ಗಳು ಹಾಗೂ ಬ್ಯಾಂಕ್ ದಾಖಲೆಗಳ ಪರೀಶೀಲನೆಯನ್ನು ತೀವ್ರಗೊಳಿಸಿದೆ.

ಪ್ರಾಣಪ್ರತಿಷ್ಠಾಪನೆಗೆ ವೆಚ್ಚವಾಗಿತ್ತು 113 ಕೋಟಿ ರೂ.

ಎಸ್‌ಐಟಿ ಸದ್ಯ ಪರಿಶೀಲಿಸುತ್ತಿರುವ ಒಟ್ಟು ವೆಚ್ಚದಲ್ಲಿ ಅತಿ ದೊಡ್ಡ ಮೊತ್ತವು 2024ರ ಜನವರಿ 22ರಂದು ನಡೆದ ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಂಬಂಧಿಸಿದ್ದಾಗಿದೆ. ಸುಮಾರು 8,000 ಗಣ್ಯರು ಭಾಗವಹಿಸಿದ್ದ ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಟ್ರಸ್ಟ್ ಒಟ್ಟು 113 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ದಾಖಲೆಗಳು ಹೇಳುತ್ತಿವೆ. ಇದರಲ್ಲಿ ತಾತ್ಕಾಲಿಕ ಜರ್ಮನ್ ಶೆಡ್‌ಗಳು ಮತ್ತು ಟೆಂಟ್‌ ಸಿಟಿ ನಿರ್ಮಾಣಕ್ಕೆ 35.97 ಕೋಟಿ ರೂ., ಅಕ್ಷತೆ ಪೂಜೆ ಅಭಿಯಾನಕ್ಕೆ 30.85 ಕೋಟಿ ರೂ., ಪ್ರಚಾರ ಮತ್ತು ಜಾಹೀರಾತುಗಳಿಗಾಗಿ 21.77 ಕೋಟಿ ರೂ. ಹಾಗೂ ಅಲಂಕಾರ ಮತ್ತು ವಿದ್ಯುತ್ ದೀಪೋತ್ಸವಕ್ಕಾಗಿ 14.62 ಕೋಟಿ ರೂಪಾಯಿಗಳನ್ನು ಬಳಸಲಾಗಿದೆ. ಈ ಎಲ್ಲಾ ವೆಚ್ಚಗಳು ಟ್ರಸ್ಟ್‌ನ ನಿಯಮಾವಳಿಗಳ ಪ್ರಕಾರವೇ ನಡೆದಿವೆಯೇ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಧ್ವಜಾರೋಹಣ, ಮಹಾಕುಂಭ ವೆಚ್ಚದ ಮೇಲೂ ನಿಗಾ

ಕೇವಲ ಪ್ರಾಣಪ್ರತಿಷ್ಠಾಪನೆ ಮಾತ್ರವಲ್ಲದೆ, 2025ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000 ಗಣ್ಯರ ಸಮ್ಮುಖದಲ್ಲಿ ನಡೆದ ಮಂದಿರದ ಧ್ವಜಾರೋಹಣ ಕಾರ್ಯಕ್ರಮದ 10.12 ಕೋಟಿ ರೂ. ವೆಚ್ಚದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಇದರ ಸರಾಸರಿ ಲೆಕ್ಕಾಚಾರ ನೋಡಿದರೆ ಪ್ರತಿ ಅತಿಥಿಗೆ ಸುಮಾರು 16,000 ರೂ. ವೆಚ್ಚವಾಗಿರುವುದು ಕಂಡುಬಂದಿದೆ. ಇದರೊಂದಿಗೆ 2025ರ ಜನವರಿಯಲ್ಲಿ ನಡೆದ ಪ್ರತಿಷ್ಠಾ ದ್ವಾದಶಿ ಕಾರ್ಯಕ್ರಮದ 83 ಲಕ್ಷ ರೂ. ಹಾಗೂ ಮಹಾಕುಂಭ ಮೇಳದ ಸಂದರ್ಭದಲ್ಲಿ ಅಯೋಧ್ಯೆಗೆ ಬಂದ ಭಕ್ತರ ವ್ಯವಸ್ಥೆಗಾಗಿ ಖರ್ಚು ಮಾಡಲಾದ 43 ಲಕ್ಷ ರೂಪಾಯಿಗಳ ಲೆಕ್ಕವನ್ನೂ ಅಧಿಕಾರಿಗಳು ಜಾಲಾಡುತ್ತಿದ್ದಾರೆ.

ಟ್ರಸ್ಟ್‌ನಲ್ಲಿ ಪ್ರಮುಖ ಹುದ್ದೆಗಳ ಬದಲಾವಣೆ

ಕಾಣಿಕೆ ಹಣ ದುರುಪಯೋಗ ಹಾಗೂ ವೆಚ್ಚಗಳ ಕುರಿತ ವಿವಾದವು ಟ್ರಸ್ಟ್‌ನ ಒಳಗೆ ಭಾರಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸೋಮವಾರ ನಡೆದ ಸಭೆಯಲ್ಲಿ ಟ್ರಸ್ಟ್ ಇವರಿಬ್ಬರ ರಾಜೀನಾಮೆಯನ್ನು ಅಂಗೀಕರಿಸಿದೆ. ಸದ್ಯ ಕೃಷ್ಣ ಮೋಹನ್ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ಭಕ್ತರಲ್ಲಿ ವಿಶ್ವಾಸ ಮರುಕಳಿಸಲು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಆಡಳಿತಾತ್ಮಕ ಪರಾಮರ್ಶೆ ನಡೆಸುವುದಾಗಿ ಟ್ರಸ್ಟ್ ಪ್ರಕಟಿಸಿದೆ.

ಚಿನ್ನ, ಬೆಳ್ಳಿ ಕಾಣಿಕೆಗಳ ದಾಖಲೆ ಪರಿಶೀಲನೆ

ಹಣದ ವೆಚ್ಚದ ಜೊತೆಗೆ, ದೇಶದ ವಿವಿಧ ಮೂಲೆಗಳಿಂದ ಭಕ್ತರು ರಾಮಲಲ್ಲಾನಿಗೆ ಸಮರ್ಪಿಸಿರುವ ಅಮೂಲ್ಯ ಆಭರಣಗಳು ಮತ್ತು ಚಿನ್ನ-ಬೆಳ್ಳಿಯ ದಾಸ್ತಾನುಗಳನ್ನೂ ಎಸ್‌ಐಟಿ ಮರುಪರಿಶೀಲನೆ ಮಾಡುತ್ತಿದೆ. ದಾಖಲೆಗಳ ಪ್ರಕಾರ, ನವೆಂಬರ್ 2024 ರಿಂದ ಫೆಬ್ರವರಿ 2025ರ ಅವಧಿಯಲ್ಲಿ 2.3 ಕೆಜಿ ಚಿನ್ನ ಮತ್ತು 83.3 ಕೆಜಿ ಬೆಳ್ಳಿ ಹಾಗೂ ಮಹಾಕುಂಭದ ಅವಧಿಯಲ್ಲಿ ಹೆಚ್ಚುವರಿಯಾಗಿ 1.5 ಕೆಜಿ ಚಿನ್ನ ಮತ್ತು 28 ಕೆಜಿ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ನೀಡಿದ್ದಾರೆ. ಇವೆಲ್ಲವೂ ಸುರಕ್ಷಿತವಾಗಿವೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದ್ದು, ಎಸ್‌ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ. ಸದ್ಯಕ್ಕೆ ಇದು ಕೇವಲ ನಿಯಮಾನುಸಾರ ನಡೆಯುತ್ತಿರುವ ತನಿಖೆಯಾಗಿದ್ದು, ಯಾವುದೇ ಆರ್ಥಿಕ ಅವ್ಯವಹಾರ ನಡೆದಿರುವ ಬಗ್ಗೆ ಎಸ್‌ಐಟಿ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡ ಪ್ರಕಟ ; ಸ್ಯಾಮ್ಸನ್‌ಗೆ ಶಾಕ್‌, ಸೂರ್ಯವಂಶಿಗೆ ಮತ್ತೊಮ್ಮೆ ಅವಕಾಶ

Tags: IndiaKarnataka News beat
SendShareTweet
Previous Post

ಪಿಡಿಓ ಕಿರುಕುಳ ಆರೋಪ ; ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!

Next Post

ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

Related Posts

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!
ದೇಶ

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

Next Post
ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ 'ಲೋಕಾ'ಗೆ N.R ರಮೇಶ್‌ ದೂರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat