ರಾಮನಗರ : ರಾಮನಗರ ಜಿಲ್ಲೆಯ ಅಂಚಿಪುರ ಕಾಲೋನಿಯಲ್ಲಿ ಜಮೀನು ವಿವಾದದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ಕಿತ್ತಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ಮಂಜುನಾಥ್, ಯೋಗೇಂದ್ರ ಹಾಗೂ ಚಂದ್ರಕಲಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತೋಷ್, ಶೇಖರ್, ಹೃತ್ವಿಕ್, ಚಿರಂತ್ ಹಾಗೂ ಮಹದೇವಮ್ಮ ಎಂಬವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಘಟನೆ ವೇಳೆ ನಡೆದ ಗಲಾಟೆಯ ದೃಶ್ಯಗಳನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎನ್‌ಸಿ (ನಾನ್ ಕಾಗ್ನಿಜಬಲ್) ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು



















