ರಾಮನಗರ : ಹಳೆ ದ್ವೇಷಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ನಿಶಾಂತ್ ಕಳೆದ ಎರಡೂವರೆ ತಿಂಗಳಿನಿಂದ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ತಡರಾತ್ರಿ ಹೋಟೆಲ್ ನಲ್ಲಿ ಮಲಗಿದ್ದ ನಿಶಾಂತ್ ನ ಕಿವಿ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರೋ ದುಷ್ಕರ್ಮಿಗಳು ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕೂಡಾ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದಲೂ ಪರಿಶೀಲನೆ ಮಾಡಲಾಗಿದೆ.
ಇದನ್ನೂ ಓದಿ : ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ



















