ಮುಂಬೈ: ಬಕ್ರೀದ್ (Bakrid) ಹಿನ್ನೆಲೆಯಲ್ಲಿ ಬಲಿ ನೀಡುವ ಕುರಿಯ ಮೇಲೆ ರಾಮ ಎಂದು ಹೆಸರು ಬರೆದಿದ್ದ ಆರೋಪದ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ದೇಶಾದ್ಯಂತ ಇಂದು ಬಕ್ರೀದ್ ಹಬ್ಬದ ಆಚರಣೆಗಾಗಿ ಎಲ್ಲೆಡೆ ಸರ್ಕಾರಿ ರಜೆ ಘೋಷಿಸಲಾಗಿದೆ. ಆದರೆ, ಹಿಂದೂ ಭಾವನೆಗೆ ಧಕ್ಕೆ ತರುವ ಈ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಲಿ ನೀಡಲು ಮಾರಾಟಕ್ಕಿಟ್ಟಿದ್ದ ಕುರಿಯ ಮೇಲೆ “ರಾಮ” (Ram) ಎಂದು ಬರೆದಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈ ಪ್ರದೇಶದ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಲ್ಲಿನ “ಗುಡ್‌ಲಕ್ ಕುರಿ ಮಾಂಸದ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಮಟನ್ ಅಂಗಡಿಯ ಮಾಲೀಕ ಮಹಮ್ಮದ್ ಶಾಫಿ ತಮ್ಮ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಿಳಿ ಕುರಿಯ ಮೇಲೆ ಹಳದಿ ಬಣ್ಣದಲ್ಲಿ ರಾಮ ಎಂದು ಬರೆಯಲಾಗಿದೆ. ಹಿಂದೂ ಸಂಘಟನೆಯ ಕೆಲವರು ಅಲ್ಲಿಗೆ ಆಗಮಿಸಿ ಅದನ್ನು ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಅಲ್ಲದೇ, ಈ ರೀತಿ ರಾಮನ ಹೆಸರನ್ನು ಬರೆದು ಕುರಿಯನ್ನು ಬಲಿ ನೀಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಆ ಕುರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಮಟನ್ ಅಂಗಡಿಯ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಲಾಗುತ್ತಿದೆ.