ಚಾಲೆಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ವಿರುದ್ಧ ಮೋಹಕ ತಾರೆ ರಮ್ಯಾ ಆಕ್ರೋಶ ಹೊರಹಾಕಿ, ದೂರು ನೀಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ.
ತಮ್ಮ ವಕೀಲರ ಜೊತೆ ಚರ್ಚೆ ನಡೆಸಿ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು ಸಲ್ಲಿಸುವುದಾಗಿ ರಮ್ಯಾ ಹೇಳಿದ್ದಾರೆ. ದರ್ಶನ್ ಗೆಳತಿ ಪವಿತ್ರಾಗೌಡಗೆ ಕೊಲೆಯಾದ ರೇಣುಕಾಸ್ವಾಮಿ ಕಳಿಸುತ್ತಿದ್ದ ಟೆಕ್ಸ್ಟ್ ಸಂದೇಶಗಳು ಮತ್ತು ದರ್ಶನ್ ಅಭಿಮಾನಿಗಳು ತನಗೆ ಕಳಿಸುತ್ತಿರುವ ಸಂದೇಶಗಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಟ್ವೀಟ್ ಮಾಡಿದ್ದ ರಮ್ಯಾ, ಮಹಿಳೆಯರ ಬಗ್ಗೆ ಇಂಥ ಕೀಳು ಮನಸ್ಥಿತಿ ಹೊಂದಿರುವುದರಿಂದಲೇ ಅವರ ಮೇಲೆ, ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿವೆ ಎಂದಿದ್ದರು.
ಸದ್ಯ ವಕೀಲರೊಂದಿಗೆ ಚರ್ಚೆಸಿ ರಮ್ಯಾ ಇಂದೇ ದೂರು ನೀಡುವ ಸಾಧ್ಯತೆ ಇದೆ.