ಕೋರ್ಟ್ ನಲ್ಲಿ ನಟ ದರ್ಶನ್ ಬೇಲ್ ಕುರಿತು ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಕೇಸ್ ಬಗ್ಗೆ ನಟಿ ರಮ್ಯಾ ಮಾತನಾಡಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ಅವರು, ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ಬರೆದುಕೊಂಡಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು.
ನಟ ದರ್ಶನ್ ಸೇರಿ ಏಳು ಜನರ ಜಾಮೀನು ಪ್ರಶ್ನಿಸಿ ಪೊಲೀಸ್ ಹಾಗೂ ಸರಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಸರ್ಕಾರದ ಪರ ವಕೀಲರಾದ ಸಿದ್ಧಾರ್ಥ್ ಲೂತ್ರಾ ನ್ಯಾಯಮೂರ್ತಿ ಪರ್ದಿವಾಲಾ ಮುಂದೆ ವಾದ ಮಂಡಿಸಿದ್ದಾರೆ. ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ತರಾತುರಿಯ ನಿರ್ಧಾರವನ್ನು ಮಾಡಲು ನಾವು ಒಪ್ಪುವುದಿಲ್ಲ ಎಂದು ಹೇಳಿ ಆದೇಶ ಕಾಯ್ದಿರಿಸಿದೆ.



















