ಮುಂಬೈ : ಕೆಎಲ್ ರಾಹುಲ್ ಭರ್ಜರಿ ಶತಕ ಹಾಗೂ ಎಸ್ ರವಿಚಂದ್ರನ್ ಅರ್ಧಶತಕದ ಬಲದಿಂದ ಕರ್ನಾಟಕ ತಂಡ, 2025-26ರ ಸಾಲಿನ ರಣಜಿ ಟ್ರೋಫಿ (Ranji Trophy 2025-26) ಟೂರ್ನಿಯ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಸೆಮಿಫೈನಲ್ಗೆ ಪ್ರವೇಶ ಮಾಡಿದೆ.
ಫೆಬ್ರವರಿ 15ರಂದು ಉತ್ತರಾಖಂಡ ವಿರುದ್ಧ ಆರಂಭವಾಗಲಿರುವ ಮೊದಲನೇ ಸೆಮಿಫೈನಲ್ ಪಂದ್ಯದಲಿ ದೇವದತ್ ಪಡಿಕ್ಕಲ್ ನಾಯಕತ್ವದ ಕರ್ನಾಟಕ ತಂಡ ಕಾದಾಟ ನಡೆಸಲಿದೆ.

ಇಂದು ನಡೆದ ಪಂದ್ಯದಲ್ಲಿ ತಂಡದ ಪರ ಅನುಭವಿ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 25ನೇ ಶತಕವನ್ನು ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. 182 ಎಸೆತಗಳಲ್ಲಿ 130 ರನ್ ಗಳಿಸಿ ತಂಡದ ಗೆಲುವಿಗೆ ನೆರವು ನೀಡಿದ ಕೆಎಲ್ ರಾಹುಲ್, ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಇದನ್ನೂ ಓದಿ : ಮಹಿಳೆಯ ಖಾಸಗಿ ವಿಡಿಯೋ ಬ್ಲಾಕ್ಮೇಲ್ ಕೇಸ್ | ಮತ್ತೋರ್ವ ಆರೋಪಿ ಅರೆಸ್ಟ್



















