ಜೈಪುರ : ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಅವರು ರಾಜಸ್ಥಾನ್ ರಾಯಲ್ಸ್ ವಿರುದ್ದದ 2025-26ರ ಸಾಲಿನ ರಣಜಿ ಟ್ರೋಫಿ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ.
ಈ ಶತಕದ ಮೂಲಕ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತಮ್ಮ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ. ಎಡಗೈ ಆಟಗಾರನ ಶತಕದ ಹೊರತಾಗಿಯೂ ಮುಂಬೈ ತಂಡ, ರಾಜಸ್ಥಾನ್ ರಾಯಲ್ಸ್ ಎದುರು ಪಂದ್ಯವನ್ನು ಡ್ರಾ ವನ್ನು ಸಾಧಿಸಿತು.
ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಅಂತ್ಯವಾದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಯಶಸ್ವಿ ಜೈಸ್ವಾಲ್, 120 ಎಸೆತಗಳಲ್ಲಿ 11 ಬೌಂಡರಿಗಳೊಂದಿಗೆ ಶತಕವನ್ನು ಪೂರ್ಣಗೊಳಿಸಿದರು. ಅಂತಿಮವಾಗಿ ಅವರು ಆಡಿದ 174 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 18 ಬೌಂಡರಿಗಳೊಂದಿಗೆ 156 ರನ್‌ಗಳನ್ನು ಕಲೆ ಹಾಕಿದರು. ಇದು ಇವರ 17ನೇ ಪ್ರಥಮ ದರ್ಜೆ ಕ್ರಿಕೆಟ್ ಶತಕವಾಗಿದೆ. ಅಂದ ಹಾಗೆ ಹರಿಣ ಪಡೆಯ ವಿರುದ್ದದ ಟೆಸ್ಟ್ ಸರಣಿಯು ನವೆಂಬರ್ 14 ರಂದು ಆರಂಭವಾಗಲಿದೆ.
ಇದನ್ನೂ ಓದಿ : ಹುಲಿ ಸೆರೆಗೆ ಅಖಾಡಕ್ಕಿಳಿದ ಸಾಕಾನೆಗಳು | ಮುನ್ನೆಚ್ಚರಿಕೆಯಾಗಿ ಗ್ರಾಮಗಳಲ್ಲಿ 144 ಸೆಕ್ಷನ್ ಜಾರಿ



















