ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ಈ ಕುರಿತು ಡಿಆರ್ ಐ ತನಿಖೆ ನಡೆಸುತ್ತಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಲ್ಲೂ ಎಫ್ ಐಆರ್ ದಾಖಲಾಗಿದೆ.
ನಟಿ ರನ್ಯಾ ರಾವ್ ವಿರುದ್ಧ ಸಿಬಿಐ ದೆಹಲಿಯ ಪ್ರಧಾನ ಕಚೇರಿಯಲ್ಲಿ FIR ದಾಖಲಾಗಿದೆ. ಡಿಆರ್ ಐ ಅಧಿಕಾರಿಗಳ ದೂರು ಆಧರಿಸಿ FIR ದಾಖಲಿಸಿಕೊಳ್ಳಲಾಗಿದೆ. ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡಿರುವ ಹಿನ್ನೆಲೆಯಲ್ಲಿ ಡಿಆರ್ ಐ ನೀಡಿದ ದೂರಿನಂತೆ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡಿದೆ. ಬೆಂಗಳೂರು ಮತ್ತು ಮುಂಬೈನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.