ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಗೆ ಸೇರಿದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.
ಸುಮಾರು 34.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದೆಹಲಿ ಇಡಿ ಪ್ರದಾನ ಕಚೇರಿಯಿಂದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪಿಎಂಎಲ್ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸಿದ್ದರು. ಈಗ ಗೋಲ್ಡ್ ಸ್ಮಗ್ಲಿಂಗ್ ಮತ್ತು ವರ್ಗಾವಣೆ ಕುರಿತು ತನಿಖೆ ನಡೆಯುತ್ತಿದೆ. ಪ್ರಮುಖ ಆರೋಪಿ ಹರ್ಷವರ್ದಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಮತ್ತು ಆಕೆಯ ಸಹಚರರಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಬೆಂಗಳೂರು ಹಾಗೂ ತುಮಕೂರಿನಲ್ಲಿರುವ ಸ್ಥಿರಾಸ್ತಿ ಸೇರಿದಂತೆ ಇನ್ನಿತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.