ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಆದೇಶ ಮಾಡಿದೆ.
ಮಾನಹಾನಿಕಾರಕ ಸುದ್ದಿಗಳನ್ನು ಪ್ರಕಟಿಸದಂತೆ ಕೆಳ ಹಂತದ ಕೋರ್ಟ್, ಈ ಹಿಂದೆ ಪ್ರತಿಬಂಧಕಾಜ್ಞೆ ನೀಡಿತ್ತು. ಆದರೆ, ಆ ಅದೇಶವನ್ನ ಯಾವುದೇ ಮಾಧ್ಯಮಗಳು ಪಾಲಿಸುತ್ತಿಲ್ಲ ಎಂದು ರನ್ಯಾ ತಾಯಿ ಹೈಕೋರ್ಟ್ ಮೊರೆ ಹೋಗಿದ್ದರು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಎಲ್ಲ ಪ್ರತಿವಾದಿ ಮಾಧ್ಯಮಗಳಿಗೂ ತುರ್ತು ನೋಟಿಸ್ ಜಾರಿ ಮಾಡಿದೆ. ರನ್ಯಾ ವಿರುದ್ಧ ಯಾವುದೇ ಮಾನ ಹಾನಿಕಾರಕ ಸುದ್ದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಸೂಚನೆ ನೀಡಲಾಗಿದೆ.