ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ (Munirathna) ಸೇರಿದಂತೆ 7 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಈ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು (CID Officials) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ (Chargesheet) ಪಟ್ಟಿ ಸಲ್ಲಿಸಿದ್ದಾರೆ. 3 ಸಾವಿರ ಪುಟಗಳ ಚಾರ್ಜ್ಶೀಟ್ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರು ಉಲ್ಲೇಖಿಸಲಾಗಿದೆ.
ವಿಐಪಿಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಬ್ಲ್ಯಾಕ್ಮೇಲ್ ಮಾಡಿದ ಬಗ್ಗೆಯೂ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮುನಿರತ್ನ ವಿರುದ್ಧ ಐಪಿಸಿ ಕಲಂ 354(ಎ),354(ಸಿ), 376(2)(ಎನ್),308, 270,120ಬಿ,119,504,506,201,511, ರೆ/ವಿ 34 ಐಪಿಸಿ, ಕಲಂ 66ಇ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು.