ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನ ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು. ಈಗ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ನೀಡಿದೆ. ಹೀಗಾಗಿ ಶಾಸಕ ಮುನಿರತ್ನ ಮತ್ತೆ ಜೈಲು ಪಾಲಾಗಿದ್ದಾರೆ.
ಇತ್ತೀಚೆಗಷ್ಟೇ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವ ಹಾಗೂ ಜಾತಿ ನಿಂದನೆ ಮಾಡಿದ್ದ ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ, ಬಿಡುಗಡೆಯಾಗುತ್ತಿದ್ದಂತೆ ಕಗ್ಗಲೀಪುರ ಪೊಲೀಸರು ಅತ್ಯಾಚಾರ ಪ್ರಕರಣದಲ್ಲೆ ಅರೆಸ್ಟ್ ಮಾಡಿದ್ದರು.
ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.