ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಹಿಂದೆ ಕೂಡ ಪ್ರಜ್ವಲ್, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿ ವಜಾಗೊಳಿಸಿದ್ದರು.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎಸ್ ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ಸುಮಾರು 2 ಸಾವಿರ ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಬಸವನಗುಡಿ ಮನೆಯಲ್ಲಿ ಕೆಲಸದ ಮಹಿಳೆಯ ಮೇಲೆ ಪ್ರಜ್ವಲ್ ಅತ್ಯಾಚಾರ ನಡೆಸಿದ್ದಾನೆ.
ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ, ಸಂತ್ರಸ್ತೆಯ ಮಗಳಿಗೂ ಪ್ರಜ್ವಲ್ ವಿಡಿಯೋ ಕಾಲ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವುದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.