ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಗುಂಡೇಟಿಗೆ ಬಲಿಯಾಗಿರುವ ಆರೋಪಿ ಎನ್ನಲಾಗಿದೆ. ಮಹಿಳಾ ಪಿಎಸ್‌ಐ ಗುಂಡೇಟು ನೀಡಿದ್ದರು. ಎದೆಗೆ ಗುಂಡು ತಾಗಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಹುಬ್ಬಳ್ಳಿ ಹೊರವಲಯದ ಹೈವೈನಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಆರೋಪಿಯು ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಆಗ ಅದು ಎದೆಗೆ ಬಿದ್ದಿದೆ ಎನ್ನಲಾಗಿದೆ.
ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಆರೋಪಿ ಸಿಕ್ಕಿಬಿದ್ದಿದ್ದ. ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಪತ್ತೆ ಹಚ್ಚಿದ್ದೇವು. ಆರೋಪಿಯು ಮಗುವನ್ನು ಕೊಂದಿದ್ದು ಪತ್ತೆಯಾಗಿತ್ತು. ಸಿಸಿಟಿವಿಯಲ್ಲಿ ಮಗು ಹೊತ್ತೊಯ್ದ ದೃಶ್ಯ ಸೆರೆಯಾಗಿತ್ತು. ಸ್ಥಳಕ್ಕೆ ತೆರಳಿ ಹುಡುಕಿದಾಗ ಕೃತ್ಯ ಬಯಲಾಗಿತ್ತು. ಮಗು ಕಾಣೆಯಾಗಿದೆ ಎಂದು ದೂರು ಬಂದಿತ್ತು ಎಂದಿದ್ದಾರೆ.
ಕಮಿಷನರ್ ಕಿಮ್ಸ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರು ಕಿಮ್ಸ್ ಗೆ ದಾಖಲಾಗಿದ್ದಾರೆ. ಬಿಹಾರ ಮೂಲದ ಆರೋಪಿ ರಕ್ಷಿತ್ ಕಾಂತಿ ಈಗ ಸಾವನ್ನಪ್ಪಿದ್ದಾನೆ.



















