ಬಾಗಲಕೋಟೆ : ಮಾನಸಿಕ ಅಸ್ವಸ್ಥೆಯಾದ ವಿಚ್ಛೇದಿತ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತಹ ಘಟನೆ ಬಾಗಲಕೋಟೆಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ನಲ್ಲಿ ನಡೆದಿದೆ.
ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋಗಲಾಗಿದೆ. ಸದ್ಯ ಮಹಿಳೆ ಮೇಲೆ ಗ್ಯಾಂಗ್ನಿಂದ ಅಥವಾ ಒಬ್ಬರಿಂದ ಅತ್ಯಾಚಾರ ನಡೆಯಿತಾ ಎಂಬುವುದು ಪೊಲೀಸ್ ತನಿಖೆ ನಡೆಸಿದ್ದಾರೆ. ಹುನಗುಂದ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಚ್ಚೇದಿತ ಮಹಿಳೆ ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದವರು. ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋದ ಮಹಿಳೆಯನ್ನು ನೋಡಿದ ಸಾರ್ವಜನಿಕರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಅವರನ್ನು ಮೊದಲಿಗೆ ಹುನಗುಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ | ವಿಡಿಯೋ ಹರಿಬಿಟ್ಟ ದುರುಳರನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು



















